ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ರಟುವಾದಲ್ಲಿ ಮದರಸಾ ನಿರ್ವಹಣಾ ಸಮಿತಿಯ ಚುನಾವಣೆ ಹಿನ್ನೆಲೆಯಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳು ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ.
ಮದರಸಾ ಚುನಾವಣೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಎರಡು ಗುಂಪುಗಳ ನಡುವಿನ ಘರ್ಷಣೆಗೆ ಉದ್ವಿಗ್ನತೆ ಹೆಚ್ಚಾಯಿತು .
ಘಟನೆಯಲ್ಲಿ ಮೂರು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ ಒಬ್ಬರಿಗೆ ಬುಲೆಟ್ ತಗುಲಿ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರದೇಶದಲ್ಲಿ ಪೊಲೀಸ್ ಬಿಗಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಗಾಯಾಳುಗಳನ್ನು ಮಾಲ್ಡಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಎರಡು ಕಡೆಯವರು ಕಬ್ಬಿಣದ ರಾಡ್ ಮತ್ತು ಬಿದಿರಿನ ಕೋಲುಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ. ಈ ಘರ್ಷಣೆಯಲ್ಲಿ ವಾಹನಗಳು ಸೇರಿದಂತೆ ಹಲವು ಆಸ್ತಿಗಳು ಧ್ವಂಸವಾಗಿವೆ ಎನ್ನಲಾಗಿದೆ.