ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿಯ ಕಾಪು ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ(39) ಹತ್ಯೆಗೀಡಾದ ವ್ಯಕ್ತಿ.
ಇಬ್ಬರು ದುಷ್ಕರ್ಮಿಗಳು ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶರತ್‌ರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪೊಲೀಸರಿಂದ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಹಂತಕರ ಪತ್ತೆಗೆ ಬಲೆ ಬೀಸಲಾಗಿದೆ.