ಅನಾರೋಗ್ಯದಿಂದಾಗಿ ವಿಚಾರಣಾಧೀನ ಕೈದಿ ಸಾವು

ಹೊಸದಿಗಂತ ವರದಿ ಮೈಸೂರು:‌ 

ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾರಾಗೃಹ ಸೇರಿದ್ದ ವಿಚಾರಣಾಧೀನ ಖೈದಿಯೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ. ನರಸಿಂಹ(40) ಮೃತ ಕೈದಿ. ವಿ.ವಿ.ಪುರಂ ಪೊಲೀಸ್ ಠಾಣೆ ಪೊಲೀಸರು ನರಸಿಂಹರನ್ನು ಬಂಧಿಸಿ ಜನವರಿ 4 ರಂದು ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಿದ್ದರು.

ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನರಸಿಂಹರನ್ನು ನಗರದ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!