ಹೊಸದಿಗಂತ ಡಿಜಿಟಲ್ ಡೆಸ್ಕ್ :
ನಟ ಪುನೀತ್ ರಾಜಕುಮಾರ್ ಅವರ ಖ್ಯಾತಿ ಅಪಾರ. ಅವರ ಕೊಡುಗೆ ಮತ್ತು ನೆನಪುಗಳೊಂದಿಗೆ ಅವರನ್ನು ನೆನೆಯಯದವರಿಲ್ಲ. ಪುನೀತ್ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ಇಲ್ಲಿದೆ.
ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ನಿಂದ ಬನ್ನೇರುಘಟ್ಟ ರೋಡ್ ವರೆಗಿನ 12 ಕಿ.ಮೀ. ಉದ್ದದ ಹೊರ ವರ್ತುಲ ರಸ್ತೆಗೆ ಪುನೀತ್ ರಾಜಕುಮಾರ್ ಹೆಸರನ್ನು ಇರಿಸುವ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ರಸ್ತೆಯನ್ನು ನಾಳೆ ಉದ್ಘಾಟಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸೋಮವಾರ ಹೇಳಿದ್ದಾರೆ.
ಪದ್ಮನಾಭನಗರದಲ್ಲಿ ರಸ್ತೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಸೇರಿ ಅನೇಕರು ಭಾಗಿಯಾಗುತ್ತಿದ್ದಾರೆ. ಪುನೀತ್ ಪತ್ನಿ ಅಶ್ವಿನಿಯವರು ಕೂಡ ಪಾಲ್ಗೊಳ್ಳುತ್ತಾರೆ ಎಂದು ಆರ್.ಅಶೋಕ್ ತಿಳಿಸಿದ್ದಾರೆ.