Monday, December 8, 2025

ಕೃಷ್ಣ ಮೃಗಗಳ ಸಾವಿಗೆ ಕಾರಣವೇನು?: ಪರಿಷತ್ ನಲ್ಲಿ ಅರಣ್ಯ ಸಚಿವರು ಕೊಟ್ರು ಉತ್ತರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿಯ ಭೂತರಾಮನ ಹಟ್ಟಿಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 30 ಕೃಷ್ಣ ಮೃಗಗಳ ಸಾವಿಗೆ ಸಾಂಕ್ರಾಮಿಕ ರೋಗವೇ ಕಾರಣ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ವಿಧಾನ ಪರಿಷತ್ ನಲ್ಲಿ ಸದಸ್ಯ ತಳವಾರ್ ಸಾಬಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು.

ಕೃಷ್ಣ ಮೃಗಗಳು ‘ಹೆಮರಾಜಿಕ್ ಸೆಫ್ಟಿಸೆಮಿಯಾ’ ಸಾಂಕ್ರಾಮಿಕ ರೋಗದಿಂದ ಮರಣ ಹೊಂದಿರುವುದು ಪ್ರಯೋಗಾಲಯದ ದೃಢಪಟ್ಟಿರುವುದರಿಂದ, ಮೇಲ್ನೋಟಕ್ಕೆ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿರುವುದಿಲ್ಲ ಎಂದರು.

ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳು ಮೃತಪಟ್ಟ ಪ್ರಕರಣದಲ್ಲಿ, ಪ್ರಾಣಿ ಆರೋಗ್ಯ ಮತ್ತು ಪಶುವೈದ್ಯ ಜೈವಿಕ ಸಂಸ್ಥೆ, ತಂಡವು ಹೆಬ್ಬಾಳ, ಬೆಂಗಳೂರು ಇಲ್ಲಿಂದ ನುರಿತ ಪಶುವೈದ್ಯಾಧಿಕಾರಿ ಹಾಗೂ ತಜ್ಞರ ಮೃಗಾಲಯಕ್ಕೆ ಭೇಟಿ ನೀಡಿ ಮೃತ ಪ್ರಾಣಿಗಳನ್ನು ಪರಿಶೀಲಿಸಿದ್ದು, ಸಾವಿನ ಕಾರಣ ಪತ್ತೆ ಹಚ್ಚಲು ಮೃತಪಟ್ಟ ಪ್ರಾಣಿಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.ಮೃಗಾಲಯದಲ್ಲಿರುವ ಬೇರೆ ಪ್ರಾಣಿಗಳಿಗೆ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಒಟ್ಟು 38 ಕೃಷ್ಣಮೃಗಗಳಲ್ಲಿ 31 ಪ್ರಾಣಿಗಳು ಮೃತಪಟ್ಟಿದ್ದರು, ಉಳಿದ 7 ಕೃಷ್ಣಮೃಗಗಳನ್ನು ಎಲ್ಲಾ ಮುನ್ನಚ್ಚರಿಕೆ ಕ್ರಮಗಳೊಂದಿಗೆ ಸಂರಕ್ಷಿಸಲಾಗಿದೆ ಎಂದರು.

error: Content is protected !!