ಹೊಸ ದಿಗಂತ ವರದಿ, ಶಿವಮೊಗ್ಗ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆಬ್ರವರಿ 8 ರಂದು ಶಿವಮೊಗ್ಗ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಮಧ್ಯಾಹ್ನ 12.15ಕ್ಕೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 1.35ಕ್ಕೆ ಶಿವಮೊಗ್ಗದ ಹೆಲಿಪ್ಯಾಡ್ ತಲುಪುವರು. ಮಧ್ಯಾಹ್ನ 1.45ಕ್ಕೆ ಎನ್‌ಇಎಸ್ ಮೈದಾನದಲ್ಲಿ ಆಯೋಜಿಸಲಾಗಿರುವ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ – ಶಿಲಾನ್ಯಾಸ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 3.30ಕ್ಕೆ ಸರ್ಕ್ಯೂಟ್ ಹೌಸ್‌ನಲ್ಲಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಸಂಬಂಧಿಸಿದ ನಿಯೋಗದ ಭೇಟಿ ಮಾಡಿ, ಸಂಜೆ 4 ಗಂಟೆಗೆ ಬೆಂಗಳೂರು ಪ್ರಯಾಣ ಬೆಳೆಸುವರು.