Wednesday, December 10, 2025

ಸುವರ್ಣಸೌಧದ ಮೆಟ್ಟಿಲುಗಳ ಮೇಲೆ ವಿಶ್ವದಲ್ಲೇ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಪ್ರದರ್ಶನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಡಿಸೆಂಬರ್ 9ರಂದು ಬೆಳಿಗ್ಗೆ 9:30ಕ್ಕೆ ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪ್ರದರ್ಶಿಸಲಾಗುವುದು ಎಂದು ವಿಧಾನ ಸಭೆಯ ಕಚೇರಿ ತಿಳಿಸಿದೆ.

ಕಲಬುರಗಿ ಜಿಲ್ಲೆಯ ಕಾಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಲ್ಪಟ್ಟಿರುವ ಈ ಕೆಲಸ ಮತ್ತೊಮ್ಮೆ ಐತಿಹಾಸಿಕವಾಗಲಿದೆ ಎಂದು ಪ್ರಕಟಣೆ ಹೇಳಿದೆ.

ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ.ಪಾಟೀಲ್ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ ಎಂದು ವಿಧಾನ ಸಭೆಯ ಕಚೇರಿ ಪ್ರಕಟಣೆ ತಿಳಿಸಿದೆ.

error: Content is protected !!