ಎಚ್.ಡಿ. ಕುಮಾರಸ್ವಾಮಿಯಿಂದ ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸ: ಸಚಿವ ಶ್ರೀರಾಮಲು

ಹೊಸದಿಗಂತ ವರದಿ, ಹುಬ್ಬಳ್ಳಿ:

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಮುಖ್ಯಮಂತ್ರಿ ಆಗಬಹುದು. ಬ್ರಾಹ್ಮಣ ಸಮಾಜದ ನಾಯಕರ ಆಗುವುದರಲ್ಲಿ ತಪ್ಪಿಲ್ಲ. ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಈ ರೀತಿಯ ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಡತ್ತಿದ್ದಾರೆ ಎಂದು ಸಾರಿಗೆ ಸಚಿವ ಶ್ರೀರಾಮಲು ಹರಿಹಾಯ್ದರು.

ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಕುರಿತು ಪೇಶ್ವ ಮನೆಯತನದವರು ಎಂಬ ಹೇಳಿಕೆ ನೀಡಿರುವುದು ಸರಿಯಲ್ಲ. ಅವರು ಹೀಗೇ ಏಕೆ ಮಾತನಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ. ಚುನಾವಣೆ ಸಮೀಸುತ್ತಿರುವುದರಿಂದ ಹಾಗೂ ರಾಜಕಾರಣದ ಸಲುವಾಗಿ ವಯಕ್ತಿಕ ಹೇಳಿಕೆ ನೀಡುವುದು ಬಿಡಬೇಕು. ಮುಖ್ಯಮಂತ್ರಿ ಕುರಿತು ಪಕ್ಷದಲ್ಲಿ ಇಲ್ಲಿಯವರೆಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಹೇಳಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಮುಖ್ಯಮಂತ್ರಿಯಾಗಲು ಯೋಗ್ಯ ನಾಯಕರಾಗಿದ್ದಾರೆ. ಬಿಜೆಪಿ ಹಿರಿಯ ನಾಯಕರಾದ ಅವರ ಬಗ್ಗೆ ಏಕ ವಚನದಲ್ಲಿ ಮಾತನಾಡುವುದು ಶೋಭೆ ತರುವುದಲ್ಲ. ಅವರು ಕೇವಲ ಬ್ರಾಹ್ಮಣರೆಂದು, ಜಾತಿ ಆಧಾರವಾಗಿ ಅವರಿಗೆ ಗೌರ ನೀಡುತ್ತಿಲ್ಲ. ಎಲ್ಲ ಧರ್ಮ ಮೀರಿದಂತಹ ನಾಯಕ ಅವರಾಗಿದ್ದಾರೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಅಭಿವೃದ್ಧಿ ಅನೇಕ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.
ಮಾಜಿ ಸಚಿವ ಜನಾರ್ಧನಾ ರೆಡ್ಡಿ ಅವರು ಪ್ರಾದೇಶಿಕ ಪಕ್ಷ ಆರಂಭಿಸಿದ್ದಾರೆ. ಅವರ ಮನವಲಿಸುವ ಕಾರ್ಯ ನಾವು ಮಾಡುತ್ತಿಲ್ಲ. ಈಗ ಚುನಾವಣೆ ಸಮೀಪಿಸಿದ್ದು, ನಮ್ಮ ಪಕ್ಷದ ಸಿದ್ಧಾಂತ ಪ್ರಕಾರ ಪ್ರಧಾನಿ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾಡಿದ ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಜನರಿಗೆ ಮತ ಕೇಳುವ ಕೆಲಸ ಮಾಡುತ್ತೇವೆ. ನಾನು ಬಳ್ಳಾರಿಯಿಂದ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!