ಹೊಸದಿಗಂತ ಡಿಜಿಟಲ್ ಡೆಸ್ಕ್:
ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೈಲೇ ಗತಿಯಾಗಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ತಿರಸ್ಕರಿಸಿದೆ.
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣ 15ನೇ ಆರೋಪಿಯಾಗಿದ್ದಾರೆ. ಆದರೆ 16ನೇ ಆರೋಪಿ ಚಂದ್ರಶೇಖರ ಇಂಡಿ ಅಲಿಯಾಸ್ ಚಂದು ಮಾಮಗೆ ಕೋರ್ಟ್ ಜಾಮೀನು ನೀಡಿದೆ. ಇತ್ತ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ತಿರಸ್ಕಾರ ಮಾಡಿದೆ. ಪ್ರಮುಖವಾಗಿ ಸಾಕ್ಷಿಗಳ ಮೇಲೆ ಒತ್ತಡ ಹಾಕಿದ್ದ ಆರೋಪದ ಮೇಲೆ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

