ಹೊಸದಿಗಂತ ಡಿಜಿಟಲ್ ಡೆಸ್ಕ್:
2023ರ ಚುನಾವಣೆ ವೇಳೆ ಚಿತ್ತಾಪುರದಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನೊಟೀಸ್ ಜಾರಿ ಮಾಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಅಶ್ವತ್ಥರಾಮ್ ರಾಥೋಡ್ ಎಂಬುವವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಹಾಗೂ ಸತೀಶ್ ಚಂದ್ರ ಶರ್ಮಾ ಅವರ ಪೀಠವು ಸೋಮವಾರ (ಡಿ.8) ವಿಚಾರಣೆ ನಡೆಸಿತು.
ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವುದಲ್ಲದೇ, ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವ ಪ್ರಿಯಾಂಕ್ ಖರ್ಗೆ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

