ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇನ್ನೂ ಹತ್ತು ಲಾಂಗ್ವೇಜ್ ಲ್ಯಾಬ್ ಸ್ಥಾಪಿಸಲಾಗುವುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಹೇಳಿದ್ದಾರೆ.
ಇಂದು ಮಲ್ಲೇಶ್ವರಂನ ಸರ್ಕಾರಿ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಏರ್ಪಡಿಸಲಾಗಿದ್ದು, ಸಚಿವ ಅಶ್ವತ್ಥ ನಾರಾಯಣ್ ಉದ್ಘಾಟನೆ ಮಾಡಿದ್ದಾರೆ.
ಸ್ಕಿಲ್ ಪೋರ್ಟಲ್ ವೇದಿಕೆಯಲ್ಲಿ ಸಾಕಷ್ಟು ಕಂಪನಿಗಳು ನೋಂದಣಿಯಾಗಿವೆ, ರಾಜ್ಯದಲ್ಲಿ ಉದ್ಯೋಗಾವಕಾಶಕ್ಕೆ ಕೊರತೆ ಇಲ್ಲ ಎಂದಿದ್ದಾರೆ. ಸ್ಕಿಲ್ ಕನೆಕ್ಟ್ ಉಪಕ್ರಮದ ಅಡಿ 25 ಸಾವಿರ ಉದ್ಯೋಗ ನೇಮಕಾತಿಗೆ ಚಾಲನೆ ನೀಡಲಾಗುತ್ತದೆ ಎಂದಿದ್ದಾರೆ.