February 7, 2026
Saturday, February 7, 2026
spot_img

ರಸ್ತೆಯಲ್ಲಿ ಗಾಯಗೊಂಡವರಿಗೆ ಹೆಲ್ಪ್‌ ಮಾಡ್ತಿದ್ದ ಯುವಕರಿಗೆ ಗುದ್ದಿದ ಕಾರ್‌: ನಾಲ್ವರು ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಹೃದಯವಿದ್ರಾವಕ ಅಪಘಾತ ಸಂಭವಿಸಿ ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಚಿತ್ತೋರ್‌ಗಢ-ಕೋಟಾ ಹೆದ್ದಾರಿಯ ಬೇಗುನ್ ಪಟ್ಟಣದ ಬಳಿಯ ಮದ್ನಾ ಪ್ರದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಇತರ ಮೂವರು ಸ್ಥಿತಿ ಗಂಭೀರವಾಗಿದೆ. ಆಘಾತಕಾರಿ ಸಂಗತಿಯೆಂದರೆ, ಈ ಯುವಕರು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಬಂದಿದ್ದರು. ಆದರೆ ಕೆಲವೇ ಕ್ಷಣಗಳಲ್ಲಿ ಅವರೇ ರಸ್ತೆ ಅಪಘಾತಕ್ಕೆ ಬಲಿಯಾದರು.

ರಾಂಗ್ ರೂಟ್ ನಲ್ಲಿ ಬಂದ ಸ್ವಿಫ್ಟ್ ಕಾರು ಹೆದ್ದಾರಿಯಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ಶಂಭುಲಾಲ್ ಮತ್ತು ಅವರ ಪತ್ನಿ ಕಾಳಿ ಬಾಯಿ ದಂಪತಿಗೆ ಡಿಕ್ಕಿ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರೂ ರಸ್ತೆಯಲ್ಲಿ ನೋವಿನಿಂದ ನರಳುತ್ತಿದ್ದರು. ಇದನ್ನು ನೋಡಿದ ನಾಲ್ವರು ಯುವಕರು ಸಹಾಯ ಮಾಡಲು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಪ್ರಯತ್ನಿಸಿದರು.

ಏತನ್ಮಧ್ಯೆ, ಚಿತ್ತೋರ್‌ಗಢದಿಂದ ಕೋಟಾಗೆ ಅತಿವೇಗದಲ್ಲಿ ಚಲಿಸುತ್ತಿದ್ದ ಮತ್ತೊಂದು ಕಾರು, ರಸ್ತೆಯಲ್ಲಿದ್ದ ಏಳು ಮಂದಿಗೆ ಡಿಕ್ಕಿ ಹೊಡೆದಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ ಮೂವರ ಸ್ಥಿತಿ ಗಂಭೀರವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !