Wednesday, December 10, 2025

ಕಬ್ಬಿಗೆ ಬೆಂಬಲ ಬೆಲೆ ಕೊಡುವಲ್ಲಿ ರೈತರಿಗೆ ಅನ್ಯಾಯ: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ ಬೆಳಗಾವಿ:

ರಾಜ್ಯ ಸರಕಾರದ ರೈತ ವಿರೋಧಿ ಧೋರಣೆ ವಿರುದ್ಧ ಬಿಜೆಪಿ ಸಿಡಿದೆದ್ದಿದ್ದು, ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದೆ.

ರಾಜ್ಯ ಸರಕಾರವು ರೈತ ವಿರೋಧಿ ಧೋರಣೆಯನ್ನು ಕೈ ಬಿಡಬೇಕು, ಕಬ್ಬಿಗೆ ಬೆಂಬಲ ಬೆಲೆ ನೀಡುವಲ್ಲಿ ರೈತರಿಗೆ ಸರಕಾರ ಅನ್ಯಾಯ ಮಾಡಿದೆ. ಗುರ್ಲಾಪೂರದಲ್ಲಿ ಅಹೋರಾತ್ರಿ ಹೋರಾಟ ಮಾಡಿದ ಬಳಿಕ,‌ ರಾಜ್ಯ ಸರಕಾರ ಹೋರಾಟದ ಸ್ಥಳಕ್ಕೆ ಬಂದು ಕಾಟಾಚಾರಕ್ಕೆ ಬೆಂಬಲ ಬೆಲೆ ಘೋಷಣೆ ಮಾಡಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯ ಸರಕಾರ ಕೇವಲ 50 ರೂ ಕಬ್ಬಿನ ಬೆಲೆ ಹೆಚ್ಚು ಮಾಡಿದೆ. ಉತ್ತರ ಕರ್ನಾಟಕ ಭಾಗಕ್ಕೆ ಪ್ರತಿಬಾರಿಯೂ ಅನ್ಯಾಯ ಮಾಡಿಕೊಂಡು ಬರುತ್ತಿದೆ. ಇಂದು‌ ಅಧಿವೇಶನದ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ದ ಬಿವೈ ವಿಜಯೇಂದ್ರ, ಸಿಟಿ ರವಿ, ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ಬಿಜೆಪಿ ತಿಳಿಸಿದೆ.

error: Content is protected !!