ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್ ಅನ್ನು ಮಂಡಿಸುತ್ತಿದ್ದು, ‘ನಮ್ಮ ನೆಲೆ’ ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.
ಹೊಸ ಐದು ಲಕ್ಷ ಮನೆಗಳ ನಿರ್ಮಾಣಕ್ಕೆ 5 ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಅತೀ ವೃಷ್ಠಿಯಿಂದ ಹಾಳಾದ ಮನೆಗಳ ಪುನರ್ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ.
ಮನೆಗಳ ಪುನರ್ ನಿರ್ಮಾಣಕ್ಕೆ 2627 ಕೋಟಿ ರೂಪಾಯಿ ಅನುದಾನವನ್ನೂ ಕೂಡ ಘೋಷಿಸಿದ್ದಾರೆ. ಸರ್ಕಾರಿ ಜಾಗದಲ್ಲಿರುವ ಕೊಳಗೇರಿ ನಿವಾಸಿಗಳಿಗೆ ಹಕ್ಕು ಪತ್ರ ನೀಡುವುದಾಗಿ ತಿಳಿಸಿದ್ದಾರೆ.