ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ತೊಗರಿ ಬೆಳೆಗಾರರು ಭಾರೀ ಸಂಕಷ್ಟ ಅನುಭವಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.
ತೊಗರಿ ಬೆಲೆ ದಿಢೀರ್ ಕುಸಿತದಿಂದ ರಾಜ್ಯದ ಲಕ್ಷಾಂತರ ರೈತ ಕುಟುಂಬಗಳು ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆ ಸಿಎಂ ಸಿದ್ದರಾಮಯ್ಯ, ಕನಿಷ್ಠ ಬೆಂಬಲ ಬೆಲೆ ತಕ್ಷಣ ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ದಾಖಲೆಯೇ ಇಲ್ಲದ ತೊಗರಿ ಉತ್ಪಾದನೆ ಆಗುತ್ತಿದ್ದು, ಬೆಂಬಲ ಬೆಲೆ ಇಲ್ಲದೇ ರೈತರು ಪರದಾಡುತ್ತಿದ್ದಾರೆ. ಈ ಹಿನ್ನಲೆ ಇದನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ ಎಮ್ ಎಸ್ ಪಿ ದರವನ್ನ ಹೆಚ್ಚಳ ಮಾಡುವಂತೆ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.
ಪ್ರಧಾನಿ ಮೋದಿಗೆ ಭಾವನಾತ್ಮಕ ಪತ್ರ ಬರೆದ ಸಿಎಂ ಸಿದ್ದರಾಮಯ್ಯ, ವಿಷಯ ಏನು?

