ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಣಜಿ ಟ್ರೋಫಿ ಫೈನಲ್(Ranji Trophy Final) ಪಂದ್ಯದಲ್ಲಿ ಬಂಗಾಳ ಸೌರಾಷ್ಟ್ರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಜೈದೇವ್ ಉನಾದ್ಕತ್ ಬಳಗ ಮೊದಲ ಇನಿಂಗ್ಸ್ನಲ್ಲಿ 230 ರನ್ಗಳ ಮುನ್ನಡೆ ಪಡೆಯಿತು. ಮೂರನೇ ದಿನವಾದ ಶನಿವಾರದ ಆಟದ ಅಂತ್ಯಕ್ಕೆ ಬಂಗಾಳ ಎರಡನೇ ಇನಿಂಗ್ಸ್ನಲ್ಲಿ 4 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ 61 ರನ್ಗಳಿಂದ ಹಿನ್ನಡೆಯಲ್ಲಿತ್ತು. ಭಾನುವಾರ ನಾಲ್ಕನೇ ದಿನದಾಟ ಮುಂದುವರಿಸಿದ ಬಂಗಾಲ 241 ರನ್ಗೆ ಆಲೌಟ್ ಆಗುವ ಮೂಲಕ 10 ರನ್ಗಳ ಮುನ್ನಡೆ ಸಾಧಿಸಿತು. ಗೆಲುವಿಗೆ 11 ರನ್ ಗುರಿ ಪಡೆದ ಸೌರಾಷ್ಟ್ರ 1 ವಿಕೆಟ್ ನಷ್ಟಕ್ಕೆ 14 ರನ್ ಪೇರಿಸಿ ಗೆಲುವು ದಾಖಲಿಸಿ 2ನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡ ಸಾಧನೆ ಮಾಡಿತು.
ಸೌರಾಷ್ಟ್ರ ಮೊದಲ ಇನಿಂಗ್ಸ್ನಲ್ಲಿ ಬರೋಬ್ಬರಿ 404 ರನ್ ಪೇರಿಸಿತ್ತು. ಪಂದ್ಯದಲ್ಲಿ ಒಟ್ಟು 9 ವಿಕೆಟ್ ಪಡೆದ ನಾಯಕ ಜೈದೇವ್ ಉನಾದ್ಕತ್ ಪ್ರಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.