Wednesday, December 10, 2025

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬೆಂಗಳೂರು ಏರ್ ಪೋರ್ಟ್ ಗೆ ಮುತ್ತಿಗೆ ಹಾಕಲು ಯತ್ನಿಸಿದ ವಾಟಾಳ್ ನಾಗರಾಜ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನೆಲೆ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ವಾಟಳ್ ನಾಗರಾಜ್ ಕೆಂಪೇಗೌಡ ಏರ್ಪೋರ್ಟ್ ಮುತ್ತಿಗೆ ಹಾಕಲು ಯತ್ನಿಸಿದಾಗ ಮಾರ್ಗಮಧ್ಯೆ ಪೊಲೀಸರು ವಾಟಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದರು.

ಬಾಗಲೂರು ಸಮೀಪ ಕಾರು ಅಡ್ಡಗಟ್ಟಿ ಪೋಲೀಸರು ಅವಶ್ಯಕ ಪಡೆದಿದ್ದಾರೆ ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿ ಅಪಾರ ಸಂಖ್ಯೆಯ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನೆಲೆಯಲ್ಲಿ ಇಂದು ಕೆಂಪೇಗೌಡ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಬಾಗಲೂರು ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡ ಬಳಿಕ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

error: Content is protected !!