Wednesday, December 10, 2025

ಮಡಿಕೇರಿ ದುಬಾರೆ ಆನೆ ಶಿಬಿರದಲ್ಲಿ ‘ತಕ್ಷ’ ಸಾಕಾನೆ ಸಾವು

ಹೊಸ ದಿಗಂತ ವರದಿ, ಮಡಿಕೇರಿ:

ದುಬಾರೆ ಸಾಕಾನೆ ಶಿಬಿರದಲ್ಲಿ ಸಾಕಾನೆಯೊಂದು ಸೋಮವಾರ ರಾತ್ರಿ ಸಾವಿಗೀಡಾಗಿದೆ.

ಕಳೆದ ವರ್ಷ ಡಿ.28 ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಆನೆಯೊಂದನ್ನು ಸೆರೆಹಿಡಿದು ದುಬಾರೆ ಸಾಕಾನೆ ಶಿಬಿರಕ್ಕೆ ಕರೆತರಲಾಗಿತ್ತು.

‘ತಕ್ಷ’ ಎಂಬ ಹೆಸರಿನ ಈ ಆನೆಯನ್ನು ಜು.21ರಂದು ಕ್ರಾಲ್‌ನಿಂದ ಹೊರ ಬಿಡಲಾಗಿತ್ತು.
ಕಳೆದ 10 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತಕ್ಕ ಆನೆಯ ಆರೋಗ್ಯದಲ್ಲಿ ಡಿ.6ರಿಂದ ತೀವ್ರ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿ ಡಾ. ಮುಜೀಬ್ ಅವರಿಂದ ಚಿಕಿತ್ಸೆಗೆ ಒಳಪಡಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ 9.30 ರ ಸಮಯದಲ್ಲಿ ಸಾಕಾನೆ ಸಾವನ್ನಪ್ಪಿದೆ.
ಮಂಗಳವಾರ, ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವಿ. ಅವರ ಉಪಸ್ಥಿತಿಯಲ್ಲಿ ಪಶು ವೈದ್ಯಾಧಿಕಾರಿಗಳಾದ ಡಾ.ಮುಜೀಬ್, ಡಾ. ಚಿಟ್ಟಿಯಪ್ಪ ಹಾಗೂ ಡಾ. ಸಂಜೀವ್ ಕುಮಾರ್ ಸಿಂಧೆ ಅವರುಗಳು ಮರಣೋತ್ತರ ಪರೀಕ್ಷೆ ನಡೆಸಿದ್ದು, ಆನೆಯ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಈ ಸಂದರ್ಭ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ವಿ, ಸೋಮವಾರಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಎ ಎ, ಕುಶಾಲನಗರ ವಲಯ ಅರಣ್ಯಾಧಿಕಾರಿ ರಕ್ಷಿತ್ ಆರ್, ದುಬಾರೆ ಶಿಬಿರದ ಉಪ ವಲಯ ಅರಣ್ಯಾಧಿಕಾರಿ ಕೆ.ಪಿ ರಂಜನ್, ದುಬಾರೆ ಶಾಖಾ ಉಪ ವಲಯ ಅರಣ್ಯಾಧಿಕಾರಿ ವೆಂಕಟೇಶ್ ನಲವಾಡಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

error: Content is protected !!