Wednesday, December 10, 2025

ಭಾರತ-ಆಫ್ರಿಕಾ ಟಿ20 ಮ್ಯಾಚ್: ಟಾಸ್‌ ಸೋತ ಸೂರ್ಯ ಪಡೆ ಮೊದಲು ಬ್ಯಾಟಿಂಗ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತ ಹಾಗೂ ದಕ್ಷಿಣ ಆಫ್ರಿಕಾ ಮೊದಲನೇ ಟಿ20ಐ ಪಂದ್ಯದಲ್ಲಿ ಟಾಸ್‌ ಗೆದ್ದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದ ನಾಯಕ ಏಡೆನ್‌ ಮಾರ್ಕ್ರಮ್‌ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಸೂರ್ಯಕುಮಾರ್‌ ಯಾದವ್‌ ನಾಯಕತ್ವದ ಭಾರತ ಮೊದಲು ಬ್ಯಾಟ್‌ ಮಾಡಲಿದೆ.

ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್‌ ಟೂರ್ನಿಯ ನಿಮಿತ್ತ ಈ ಸರಣಿಯು ಉಭಯ ತಂಡಗಳಿಗೆ ತುಂಬಾ ಮುಖ್ಯವಾಗಿದೆ. ಅದರಲ್ಲಿಯೂ ಭಾರತ ಹಾಗೂ ಶ್ರೀಲಕಾ ಜಂಟಿ ಆತಿಥ್ಯದಲ್ಲಿ ಚುಟುಕು ವಿಶ್ವಕಪ್‌ ನಡೆಯುವ ಕಾರಣ ಇಲ್ಲಿನ ಕಂಡೀಷನ್ಸ್‌ಗೆ ಹೊಂದಿಕೊಳ್ಳಲು ಹರಿಣ ಪಡೆಗೆ ಈ ಸರಣಿ ನೆರವು ನೀಡಲಿದೆ.

ಟೀಂ ಇಂಡಿಯಾದ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಶಿವಂ ದುಬೆ, ವರುಣ್ ಚಕ್ರವರ್ತಿ, ಅರ್ಷ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.

ದಕ್ಷಿಣ ಆಫ್ರಿಕಾ ಆಡುವ 11: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೆರಾ, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಲುಥೋ ಸಿಪಾಮ್ಲಾ, ಲುಂಗಿ ಎನ್‌ಗಿಡಿ, ಅನ್ರಿಚ್ ನೋಕಿಯಾ.

error: Content is protected !!