Wednesday, December 10, 2025

ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಮಹಿಳಾ ಟೀಂ ಇಂಡಿಯಾ ಪ್ರಕಟ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಗೆದ್ದ ಭಾರತೀಯ ಕ್ರಿಕೆಟ್ ತಂಡ ಡಿಸೆಂಬರ್ ಅಂತ್ಯದಲ್ಲಿ ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ಇದೀಗ ಈ ಸರಣಿಗಾಗಿ ಬಿಸಿಸಿಐ ಆಯ್ಕೆ ಸಮಿತಿ ಭಾರತ ಮಹಿಳಾ ತಂಡವನ್ನು ಪ್ರಕಟಿಸಿದೆ.

ಡಿಸೆಂಬರ್ 21 ರಂದು ಪ್ರಾರಂಭವಾಗಲಿರುವ ಐದು ಪಂದ್ಯಗಳ ಈ ಟಿ20 ಸರಣಿಗೆ ಹರ್ಮನ್ಪ್ರೀತ್ ಕೌರ್ ನೇತೃತ್ವದ 15 ಆಟಗಾರ್ತಿಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಈ ತಂಡದಲ್ಲಿ ಉಪನಾಯಕಿ ಸ್ಮೃತಿ ಮಂಧಾನ ಕೂಡ ಇದ್ದಾರೆ.

ನವೆಂಬರ್ 2 ರಂದು ನಡೆದ ವಿಶ್ವಕಪ್ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಭಾರತ ತಂಡ ಅಂದಿನಿಂದ ವಿರಾಮದಲ್ಲಿದೆ. ಕೆಲವು ಆಟಗಾರ್ತಿಯರು ದೇಶೀಯ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿದ್ದರೆ, ಹೆಚ್ಚಿನವರು ವಿಶ್ರಾಂತಿಯಲಿದ್ದಾರೆ.

ಈ ತಂಡದಲ್ಲಿ ಏಕದಿನ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದ ಹೆಚ್ಚಿನ ಆಟಗಾರ್ತಿಯರೂ ಇದ್ದಾರೆ.

ಟಿ20 ಸರಣಿಗೆ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ದೀಪ್ತಿ ಶರ್ಮಾ, ಸ್ನೇಹ ರಾಣಾ, ಜೆಮಿಮಾ ರೋಡ್ರಿಗಸ್, ಶೆಫಾಲಿ ವರ್ಮಾ, ಹರ್ಲೀನ್ ಡಿಯೋಲ್, ಅಮಂಜೋತ್ ಕೌರ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್, ರೇಣುಕಾ ಸಿಂಗ್, ರಿಚಾ ಘೋಷ್, ಜಿ ಕಮಲಿನಿ, ಶ್ರೀ ಚರಣಿ, ವೈಷ್ಣವಿ ಶರ್ಮಾ.

error: Content is protected !!