March 27, 2026
Friday, March 27, 2026
spot_img

WEATHER | ಹವಾಮಾನದಲ್ಲಿ ಜಾಸ್ತಿ ಏನೂ ಬದಲಾವಣೆ ಇಲ್ವಂತೆ! ನಿನ್ನೆ ಹಾಗೆ ಒಣಹವೆ ಮುಂದುವರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಬಹುಕಾಲದ ಹವಾಮಾನ ಚಲನೆಯಲ್ಲೀಗ ಯಾವುದೇ ಪ್ರಮುಖ ಬದಲಾವಣೆ ಕಂಡುಬರುವ ಲಕ್ಷಣಗಳಿಲ್ಲ. ಕಳೆದ ಕೆಲ ದಿನಗಳಿಂದ ಮುಂದುವರಿದಿರುವ ಒಣಹವೆಯ ವಾತಾವರಣ ಇಂದು ಕೂಡ ಮುಂದುವರಿದಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಇದೇ ರೀತಿಯಲ್ಲಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳ ಜಿಲ್ಲೆಗಳಲ್ಲಿ ಮಳೆಯ ಲಕ್ಷಣಗಳು ಇಲ್ಲದೆ, ಶುಷ್ಕ ಹವೆಯ ಪ್ರಭಾವ ಹೆಚ್ಚು ಕಾಣಿಸಿಕೊಳ್ಳಲಿದೆ.

ಉತ್ತರ ಒಳನಾಡಿನಲ್ಲಿ ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳು ಒಣ ಹವೆಯ ಹಿಡಿತದಲ್ಲೇ ಇರುತ್ತವೆ ಎಂದು ಇಲಾಖೆ ತಿಳಿಸಿದೆ.

ಅದೇ ರೀತಿ ದಕ್ಷಿಣ ಒಳನಾಡಿನಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಮೈಸೂರು, ಚಾಮರಾಜನಗರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಾವಣಗೆರೆ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯ ಸೂಚನೆ ಇಲ್ಲ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಒಣಹವೆ ವಾತಾವರಣವೇ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ ಮತ್ತು ಮುಂಜಾನೆ ವೇಳೆಯಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದ್ದು, ಗಾಳಿಯ ವೇಗ ಗಂಟೆಗೆ ಸರಾಸರಿ 11 ಕಿಲೋಮೀಟರ್‌ಗಳಷ್ಟು ಇರಲಿದೆ. ನಗರದಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್‌ ಸುತ್ತಲೂ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !