ಕನ್ನಡ ನಾಡಿನಲ್ಲಿ ಹುಟ್ಟುವುದೇ ಪುಣ್ಯ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ನಾಡಿನಲ್ಲಿ ಹುಟ್ಟುವುದೇ ಪುಣ್ಯ.ಅಂತಹ ನಾಡಿನಲ್ಲಿ ನಾವೆಲ್ಲರೂ ಜನಿಸಿರುವುದೇ ಸಂತಸದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದೆಹಲಿಯ ಕರ್ನಾಟಕ ಸಂಘದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೆಹಲಿಯ ತಾಲಕಟೋರಾ ಸ್ಟೇಡಿಯಂನಲ್ಲಿ ಆಯೋಜಿಸಿರುವ ‘ಬಾರಿಸು ಕನ್ನಡ ಡಿಂಡಿಮವ ಸಾಂಸ್ಕೃತಿಕ ಸಂಭ್ರಮ’ಕ್ಕೆ (Barisu Kannada Dindimava) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಹಲಿಯ ಕನ್ನಡಿಗರು ಸೇರಿ ವಿಶ್ವದ ಯಾವುದೇ ಮೂಲೆಯಲ್ಲಿರುವ ಸಮಸ್ತ ಕನ್ನಡಿಗರಿಗೆ ನನ್ನ ನಮನಗಳು. ಜ್ಞಾನ, ತಂತ್ರಜ್ಞಾನದಿಂದ ಕೂಡಿದ ನೆಲ ಕರ್ನಾಟಕ. ನಮ್ಮ ಕನ್ನಡ ನಾಡು ನೈಸರ್ಗಿಕ ಶ್ರೀಮಂತಿಕೆಯಿಂದ ಕೂಡಿದೆ. ದಾವಣಗೆರೆಯಲ್ಲಿ ನಡೆಯುವ ವಿಶ್ವಕನ್ನಡ ಸಮ್ಮೇಳನಕ್ಕೆ 7 ಕೋಟಿ ಕನ್ನಡಿಗರ ಪರವಾಗಿ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸುತ್ತೇನೆ ಎಂದು ಹೇಳಿದರು.

ಅಧ್ಯಾತ್ಮ, ಸಂಸ್ಕೃತಿ, ಕನ್ನಡ ನಾಡಿನ ವಿದ್ವಾಂಸರು, ನವ ಕರ್ನಾಟಕ ನಿರ್ಮಾಣಕ್ಕೆ ನಾಂದಿ ಹಾಡಿದ ಮೈಸೂರು ಮಹಾರಾಜರು, ಸರ್‌ ಎಂ.ವಿಶ್ವೇರಯ್ಯನವರಿಗೆ ನನ್ನ ನಮನಗಳು ಸಲ್ಲುತ್ತವೆ. ದೆಹಲಿ ಕರ್ನಾಟಕ ಸಂಘದ ಸ್ಥಾಪನೆಗೆ ಮಹತ್ವದ ಪಾತ್ರ ನಿರ್ವಹಿಸಿದ ಕೆ.ಸಿ. ರೆಡ್ಡಿಯವರನ್ನು ಸ್ಮರಿಸೋಣ ಎಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!