ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಷ್ಟ್ರೀಯ ಆರೋಗ್ಯ ಅಭಿಯಾನದ, ವಿವಿಧ ಕಾರ್ಯಕ್ರಮದಡಿ ಬೆಳಗಾವಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 36 ವಿವಿಧ ತಜ್ಞ ವೈದ್ಯರು ಹಾಗೂ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಹುದ್ದೆಗಳ ವಿವರ :
ತಜ್ಞ ವೈದ್ಯರು – 26 ಹುದ್ದೆಗಳು
ವೈದ್ಯಾಧಿಕಾರಿಗಳು – 10 ಹುದ್ದೆಗಳು
ಒಟ್ಟು 36 ಹುದ್ದೆಗಳು
ವೇತನ :
ತಜ್ಞ ವೈದ್ಯರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,10,000/-ರೂ ಮತ್ತು ವೈದ್ಯಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ :
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ :
ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಮಾರ್ಚ್ 3,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.