ಹೊಸದಿಗಂತ ಡಿಜಿಟಲ್ ಡೆಸ್ಕ್:
1998ರಲ್ಲಿ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡ ಬಾಲಿವುಡ್ ಬೆಡಗಿ, ಕನ್ನಡತಿ ಶಿಲ್ಪಾ ಶೆಟ್ಟಿ ಹೆಸರು ಇದೀಗ ಮತ್ತೆ ಸ್ಯಾಂಡಲ್ ವುಡ್ ನಲ್ಲಿ ಕೇಳಿಬರುತ್ತಿದ್ದು, ಮತ್ತೊಮ್ಮೆ ಕ್ರೇಜಿ ಸ್ಟಾರ್ ರವಿಚಂದ್ರನ್ ಜತೆ ಶಿಲ್ಪಾ ಶೆಟ್ಟಿ ನಾಯಕಿಯಾಗಿ ಬರಲಿದ್ದಾರೆ ಎನ್ನಲಾಗುತ್ತಿದೆ.
ಧ್ರುವ ಸರ್ಜಾ ಮತ್ತು ಪ್ರೇಮ್ ಕಾಂಬಿನೇಷನ್ ಡಿಕೆ ಸಿನಿಮಾದಲ್ಲಿ ಶಿಲ್ಪಾ ಶೆಟ್ಟಿ ವಿಶೇಷ ಪಾತ್ರವನ್ನು ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಶಿಲ್ಪಾ ಶೆಟ್ಟಿ ಜತೆ ಮಾತುಕತೆ ಕೂಡ ಆಡಿದ್ದಾರಂತೆ ಪ್ರೇಮ್. 20 ವರ್ಷಗಳ ಬಳಿಕ ರವಿಚಂದ್ರನ್ಗೆ ಪುನಃ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಇದೆ.
ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ.