ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬಿಬಿಎಂಪಿಯ 2023-24 ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡನೆಯಾಗಲಿದೆ.
ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಬಿಬಿಎಂಪಿ ಬಜೆಟ್ ಮಂಡನೆಯಾಗಲಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ಹತ್ತಿರ ಇರುವ ಕಾರಣ ಜನರಪರ ಯೋಜನೆಗಳಿಗೆ ಬಜೆಟ್‌ನಲ್ಲಿ ಆದ್ಯತೆ ಸಿಗಲಿದೆ.
ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯಾರಾಂ ರಾಯಪುರ ಇಂದು ಬೆಳಗ್ಗೆ 11:30 ಕ್ಕೆ ಬಜೆಟ್ ಮಂಡನೆ ಮಾಡಲಿದ್ದಾರೆ. ಒಟ್ಟಾರೆ 10ಸಾವಿರ ಕೋಟಿ ರೂಪಾಯಿ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ.
ಶ್ರವಣ ವಸತಿ ಯೋಜನೆ, ಉದ್ಯೋಗಸ್ಥ ಮಹಿಳೆಯರಿಗೆ ವಸತಿ ಕಲ್ಪಿಸುವ ಸಾವಿತ್ರಿಬಾಯಿ ಫುಲೆ ಯೋಜನೆ, ಇಂದಿರಾ ಕ್ಯಾಂಟಿನ್‌ಗೆ ಅನುದಾನ ನೀಡುವ ನಿರೀಕ್ಷೆ ಇದೆ. ಚುನಾವಣೆ ಹತ್ತಿರ ಇರುವಂತೆ ಬಿಬಿಎಂಪಿ ಬಜೆಟ್ ಮೇಲೆ ಎಲ್ಲರ ನಿರೀಕ್ಷೆ ಹೆಚ್ಚಾಗಿದ್ದು, ಜನಪರ ಯೋಜನೆಗಳ ಬಗ್ಗೆ ಬಿಬಿಎಂಪಿ ಗಮನ ಹರಿಸುವ ನಿರೀಕ್ಷೆ ಇದೆ.