Wednesday, October 22, 2025

ಧರ್ಮಸ್ಥಳದ ಸಮಾಧಿ ಶೋಧಕ್ಕೆ ಹತ್ತು ದಿನ: ಸಭೆ ನಡೆಸಿದ ಎಸ್‌ಐಟಿ, ನಡೆಯದ ಉತ್ಖನನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಕುರಿತು ಅನಾಮಿಕ ದೂರುದಾರ ನೀಡಿದ ದೂರಿನಂತೆ ಕಳೆದ ನಡೆಯುತ್ತಿರುವ ಶೋಧ ಕಾರ್ಯ ಗುರುವಾರ ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ಆದರೆ ಇಂದು ಯಾವುದೇ ರೀತಿಯ ಶೋಧ ಕಾರ್ಯ ನಡೆದಿಲ್ಲ.

ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ದೂರುದಾರ ಅನಾಮಿಕ ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಸಂಜೆ 4ರ ಸುಮಾರಿಗೆ ಹಿಂದಿರುಗಿರುವ ಮಾಹಿತಿ ಲಭ್ಯವಾಗಿದೆ.

ಈ ನಡುವೆ ಮಧ್ಯಾಹ್ನ ಎರಡು ಗಂಟೆಗೆ ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ, ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಆಗಮಿಸಿದ್ದರು. ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಅವರು ಕೂಡಾ ಸಮಯಕ್ಕೆ ಸರಿಯಾಗಿ ಆಗಮಿಸಿದ್ದರಾದರೂ ಶೋಧ ಕಾರ್ಯ ನಡೆದಿಲ್ಲ. ಬದಲಾಗಿ ಸಂಜೆಯವರೆಗೂ ಎಸ್ ಐಟಿ ಕಚೇರಿಯಲ್ಲಿ ಮುಂದಿನ ಪ್ರಕ್ರಿಯೆಗಳ ಕುರಿತು ಸಭೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

error: Content is protected !!