Wednesday, December 10, 2025

ಇನ್ಮುಂದೆ ರೌಡಿಶೀಟರ್​ಗಳನ್ನು ಪೊಲೀಸ್ ಠಾಣೆಗೆ ಕರೆಸಲು SMS, ವಾಟ್ಸಾಪ್ ಮಾಡುವುದು ಕಡ್ಡಾಯ: ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್;

ಇನ್ಮುಂದೆ ರೌಡಿಶೀಟರ್​ಗಳನ್ನು ಪೊಲೀಸ್ ಠಾಣೆಗೆ ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ಪೊಲೀಸ್ ಠಾಣೆಗೆ (Police Station) ಕರೆಸಬಹುದು ಎಂದು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ ಮೌಖಿಕವಾಗಿ ಪೊಲೀಸ್ ಠಾಣೆಗೆ ರೌಡಿಶೀಟರ್​ಗಳನ್ನು ಕರೆಸುವುದಕ್ಕೆ ಬ್ರೇಕ್​ ಬಿದ್ದಂತಾಗಿದೆ.

ಅಲೋಕ್ ಕುಮಾರ್ ಹೆಚ್ಚುವರಿ ಆಯುಕ್ತರಾಗಿದ್ದಾಗ ರೌಡಿಶೀಟರ್ ಸುನೀಲ್ ಕುಮಾರ್ ಅಲಿಯಾಸ್​ ಸೈಲೆಂಟ್ ಸುನೀಲ್​​ ಕರೆಸಿ ಎಚ್ಚರಿಸಿದ್ದರು. ಅಲೋಕ್ ಕುಮಾರ್ ವಾರ್ನಿಂಗ್​ ನೀಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹೀಗಾಗಿ ಸೈಲೆಂಟ್ ಸುನೀಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುನೀಲ್ ಕುಮಾರ್ ರಿಟ್ ಅರ್ಜಿ ಸಂಬಂಧ ಆದೇಶ ಹೊರಡಿಸಲಾಗಿದೆ.

ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಠಾಣೆಗಳಿಗೆ ರೌಡಿಶೀಟರ್​ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು SMS, ವಾಟ್ಸಾಪ್ ಸಂದೇಶ ನೀಡಬೇಕು. ಒಂದು ವೇಳೆ ಆಗಲೂ ಠಾಣೆಗೆ ಬರದಿದ್ದರೆ ರೌಡಿಶೀಟರ್ ಮನೆಗೆ ಪೊಲೀಸರು ತೆರಳಬಹುದು ಎಂದು ಪೀಠ ತಿಳಿಸಿದೆ.

ಇನ್ನು ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದರೆ ಈ ಆದೇಶದ ರಕ್ಷಣೆ ಸಿಗುವುದಿಲ್ಲ. ದಂಡಾಧಿಕಾರಿಯ ಅಧಿಕಾರವನ್ನು ಈ ಆದೇಶ ಕುಂಠಿತಗೊಳಿಸುವುದಿಲ್ಲ. ಸರ್ಕಾರ ಕಾನೂನು ರೂಪಿಸುವವರೆಗೆ ಈ ಪ್ರಕ್ರಿಯೆ ಪಾಲಿಸಲು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಸೂಚನೆ ನೀಡಿದೆ.

error: Content is protected !!