RECRUITMENT | ಎಸ್‌ಡಿಎಂ ಕಾಲೇಜು ಹೊನ್ನಾವರದಲ್ಲಿ ಬೋಧಕ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಮಲ್ನಾಡ್‌ ಪ್ರೊಗ್ರೆಸ್ಸಿವ್‌ ಎಜ್ಯುಕೇಶನ್‌ ಸೊಸೈಟಿ, ಹೊನ್ನಾವರ ಇವರ ಆಡಳಿತಕ್ಕೊಳಪಟ್ಟ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ 8 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸ್ನಾತಕೋತ್ತರ ಪದವಿ, ಪಿಹೆಚ್‌.ಡಿ ವಿದ್ಯಾರ್ಹತೆ ಜೊತೆಗೆ ಮಾರ್ಚ್‌ 22,2023ರ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಅರ್ಜಿದಾರರು 2000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-೧ರ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿದಾರರು ಆಫ್‌ಲೈನ್‌ ಮೂಲಕ ಮಾರ್ಚ್‌ 22,2023ರೊಲಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!