ಹೊಸದಿಗಂತ ಡಿಜಿಟಲ್ ಡೆಸ್ಕ್ :
ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ನಲ್ಲಿ 28 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಬಿ.ಇ/ಬಿ.ಟೆಕ್, ಪದವಿ, ಬಿ.ಕಾಂ, 10ನೇ ತರಗತಿ ವಿದ್ಯಾರ್ಹತೆ ಜೊತೆಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,499/- ರಿಂದ 50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿದಾರರು 885/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ ಅಭ್ಯರ್ಥಿಗಳು 531/-ರೂ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿದಾರರು ಆನ್‌ಲೈನ್ ಮೂಲಕ ಮಾರ್ಚ್ 24,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.