Friday, December 12, 2025

SHOCKING | ಅರುಣಾಚಲ ಪ್ರದೇಶದಲ್ಲಿ ಕಂದಕಕ್ಕೆ ಉರುಳಿದ ಟ್ರಕ್: 22 ಕಾರ್ಮಿಕರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಕಂದಕಕ್ಕೆ ಟ್ರಕ್ ಉರುಳಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ.

ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯಿಂದ ದಿನಗೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಇಂದು (ಗುರುವಾರ) ಬೆಟ್ಟದ ರಸ್ತೆಯಿಂದ ಜಾರಿ ಸುಮಾರು 1,000 ಅಡಿಗಳಷ್ಟು ಕಡಿದಾದ ಕಮರಿಗೆ ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ.

ಟಿನ್ಸುಕಿಯಾದ ಗೆಲಾಪುಖುರಿ ಟೀ ಎಸ್ಟೇಟ್‌ನ ಕಾರ್ಮಿಕರು ಕೆಲಸಕ್ಕಾಗಿ ಹಯುಲಿಯಾಂಗ್‌ಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ನಡೆದಿದೆ. ಇನ್ನೂ ಎಲ್ಲ ಮೃತದೇಹಗಳನ್ನು ಹೊರತೆಗೆದಿಲ್ಲ. ಆದರೆ ಅವರೆಲ್ಲರೂ ಮೃತರಾಗಿದ್ದಾರೆ ಎನ್ನಲಾಗಿದೆ.

ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿದವು. ಸ್ಥಳೀಯ ಅಧಿಕಾರಿಗಳು ಮತ್ತು ವಿಪತ್ತು ನಿರ್ವಹಣಾ ತಂಡಗಳು ಆ ಟ್ರಕ್​​ನಲ್ಲಿದ್ದವರನ್ನು ಹುಡುಕಲು ಆ ಸ್ಥಳಕ್ಕೆ ತಲುಪಿದ್ದಾರೆ.

error: Content is protected !!