ಹೊಸದಿಗಂತ ಡಿಜಿಟಲ್ ಡೆಸ್ಕ್ :
ಸಿಲಿಕಾನ್ ಸಿಟಿ ಎಂದೇ ಪ್ರಸಿದ್ಧಿಯಾಗಿರುವ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ರೈಲು ನಿಲ್ದಾಣದ ಮುಖ್ಯ ಗೇಟ್ ಬಳಿ ಎಸೆದ ಡ್ರಮ್ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯ ವಯಸ್ಸು 32-35 ವರ್ಷ ಎಂದು ಕರ್ನಾಟಕ ಪೊಲೀಸ್ ವರಿಷ್ಠಾಧಿಕಾರಿ (ರೈಲ್ವೆ) ಎಸ್ಕೆ ಸೌಮ್ಯಲತಾ ತಿಳಿಸಿದ್ದಾರೆ. ಆದರೆ ಆಕೆಯ ಗುರುತು ಇನ್ನೂ ಸಿಗದ ಕಾರಣ ಕೊಲೆಯ ಪ್ರಕರಣ ದಾಖಲಾಗಿದೆ. ಬೆಂಗಳೂರು ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ.
ಈ ಮೂರು ತಿಂಗಳ ಅವಧಿಯಲ್ಲಿ ಬೆಂಗಳೂರಿನ ರೈಲು ನಿಲ್ದಾಣದಲ್ಲಿ ಮಹಿಳೆಯರ ಶವ ಪತ್ತೆಯಾದ ಮೂರನೇ ಘಟನೆ ಇದಾಗಿದೆ.
ಪೊಲೀಸರು ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಆದರೆ ಎಲ್ಲಾ ಮೂರು ಘಟನೆಗಳಿಗೆ ಸಂಬಂಧವಿದೆಯೇ ಎಂದು ಹೇಳಲು ನಿರಾಕರಿಸಿದ್ದಾರೆ.