Sunday, January 11, 2026

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ: ಆರು ರಾಜ್ಯಗಳ ಗಡುವು ಒಂದು ವಾರ ವಿಸ್ತರಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ 5 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣಾ ಆಯೋಗವು ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗಡುವನ್ನು ಒಂದು ವಾರಗಳ ಕಾಲ ವಿಸ್ತರಿಸಿದೆ.

ಈ ವಿಸ್ತರಣೆಯು ತಮಿಳುನಾಡು, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ಛತ್ತೀಸ್‌ಗಢ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಅನ್ವಯಿಸುತ್ತದೆ. ಆದರೆ, ಈ ನಿರ್ಧಾರ ಪಶ್ಚಿಮ ಬಂಗಾಳಕ್ಕೆ ಅನ್ವಯವಾಗುವುದಿಲ್ಲ.

ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ತಮಿಳುನಾಡು ಮತ್ತು ಗುಜರಾತ್ ರಾಜ್ಯಗಳಿಗೆ ಡಿಸೆಂಬರ್ 14ರಂದು ಗಡುವು ವಿಧಿಸಲಾಗಿತ್ತು. ಆದರೆ, ಇದೀಗ ಆ ಗಡುವನ್ನು ಡಿಸೆಂಬರ್ 19ರವೆರೆಗ ವಿಸ್ತರಿಸಲಾಗಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಎಸ್​​ಐಆರ್​ ಸಲ್ಲಿಕೆಯ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದ್ದು, ಹೊಸ ಸಲ್ಲಿಕೆ ದಿನಾಂಕವನ್ನು ಡಿಸೆಂಬರ್ 23ಕ್ಕೆ ನಿಗದಿಪಡಿಸಲಾಗಿದೆ.

ಈ ಹಿಂದೆ, ಚುನಾವಣಾ ಆಯೋಗವು ಕೇರಳಕ್ಕೆ ಡಿಸೆಂಬರ್ 11ರಿಂದ ಡಿಸೆಂಬರ್ 18ರವರೆಗೆ ಗಡುವನ್ನು ವಿಸ್ತರಿಸಿತ್ತು. ಉತ್ತರ ಪ್ರದೇಶದಲ್ಲಿ ಇಲ್ಲಿಯವರೆಗೆ ಶೇ. 90ಕ್ಕೂ ಹೆಚ್ಚು ಫಾರ್ಮ್‌ಗಳನ್ನು ವಿತರಿಸಲಾಗಿದೆ. ಇದಲ್ಲದೆ, ಶೇ. 80ರಷ್ಟು ಮತದಾರರು ಈಗಾಗಲೇ ತಮ್ಮ ಫಾರ್ಮ್‌ಗಳನ್ನು ಪೂರ್ಣಗೊಳಿಸಿ ಸಲ್ಲಿಸಿದ್ದಾರೆ.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!