ರೈಲು ನಿಲ್ದಾಣದ ಡ್ರಂನಲ್ಲಿ ಮಹಿಳೆ ಶವ ಪತ್ತೆ ಪ್ರಕರಣ : ಮೂವರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬೆಂಗಳೂರಿನ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಡ್ರಂನಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣದ ತನಿಖೆ ಕೈಗೊಂಡ ರೈಲ್ವೆ ಪೊಲೀಸರು 8 ಆರೋಪಿಗಳ ಪೈಕಿ ಮೂವರನ್ನು ಬಂಧಿಸಿದ್ದಾರೆ. ಕೊಲೆಯಾದ ಮಹಿಳೆ ಮತ್ತು ಕೊಲೆ ಮಾಡಿದ ಎಲ್ಲಾ ಆರೋಪಿಗಳು ಬಿಹಾರ ಮೂಲದವರು.

ರೈಲು ನಿಲ್ದಾಣದ ಡ್ರಂನಲ್ಲಿ ಮಹಿಳೆಯ ಶವ ಸಿಕ್ಕ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿತ್ತು. ಕೊಲೆಯಾದ ಮಹಿಳೆಯನ್ನು ತಮನ್ನಾ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ 8 ಆರೋಪಿಗಳು ಭಾಗಿಯಾಗಿದ್ದು, ಸದ್ಯ ರೈಲ್ವೆ ಪೊಲೀಸರು ಕಮಾಲ್, ತನ್ವೀರ್, ಶಾಕೀಬ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೌಟುಂಬಿಕ ಕಲಹವೇ ಈ ಹತ್ಯೆಗೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಕಲಾಸಿಪಾಳ್ಯದಲ್ಲಿ ತಮನ್ನಾ ಹತ್ಯೆ ಮಾಡಿದ್ದ ಆರೋಪಿಗಳು ಶವವನ್ನು ಚೀಲದಲ್ಲಿ ಹಾಕಿ ಡ್ರಂನಲ್ಲಿ ತುಂಬಿ, ಆಟೋದಲ್ಲಿ ತಂದು ಸರ್‌. ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನ ಗೇಟ್‌ ಬಳಿ ಇಟ್ಟು ಹೋಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!