ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.೧೧ರಂದು ರಾತ್ರಿ ೩೪ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನೆಕ್ಕಿಲಾಡಿಯಲ್ಲಿ ನಡೆದಿದೆ.
ಮಠ ನಿವಾಸಿ ಬದ್ರುದ್ದೀನ್ ಗಾಯಗೊಂಡ ಬೈಕ್ ಸವಾರ. ಈತ ಕೂಟೇಲಿನಲ್ಲಿರುವ ಹೊಟೇಲೊಂದರಲ್ಲಿ ಕೆಲಸಕ್ಕಿದ್ದ ಎನ್ನಲಾಗಿದೆ. ಈತ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಪ್ಪಿನಂಗಡಿಯಿಂದ ನೆಕ್ಕಿಲಾಡಿ ಕಡೆಗೆ ಸಾಗುತ್ತಿದ್ದಾಗ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರಿನ ಮಧ್ಯೆ ಡಿಕ್ಕಿಯಾಗಿದೆ.
ಢಿಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ಚಕ್ರ ಸಿಡಿದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.
ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು, ಹಾಗ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

