ವಿದ್ಯುತ್ ಶಾಕ್‌ನಿಂದ ತಾಯಿ ಜೊತೆಗೆ ಇಬ್ಬರು ಮಕ್ಕಳ ಸಾವು

ಹೊಸದಿಗಂತ ವರದಿ ಕಲಬುರಗಿ:

ವಿದ್ಯುತ್ ಶಾಕ್ ಹೊಡೆದ ಪರಿಣಾಮ ತಾಯಿ ಸೇರಿದಂತೆ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂಚೋಳಿ ಪಟ್ಟಣದ ಧನಗರ ಗಲ್ಲಿಯಲ್ಲಿ ನಡೆದಿದೆ. ಚಿಂಚೋಳಿ ಪಟ್ಟಣದ ಧನಗರ ಗಲ್ಲಿಯ ತಾಯಿ ಝರಣಮ್ಮಾ (45), ಸುರೇಶ್ (22), ಮಹೇಶ್ (20) ಮೃತಪಟ್ಟ ದುದೈ೯ವಿಗಳು.

ಸರ್ವೀಸ್ ವೈರ್ ತುಂಡಾಗಿ ನೆಲಕ್ಕೆ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದ್ದು. ತಾಯಿ, ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂಚೋಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!