ಎಸ್ಸೆಸೆಲ್ಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಪ್ರಯಾಣ ಉಚಿತ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವವರಿಗೆ ಉಚಿತ ಪ್ರಯಾಣದ ಅವಕಾಶ ನೀಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇದೀಗ
ಎಸ್​​ಎಸ್​ಎಲ್​ಸಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ ಘೋಷಿಸಿದೆ.

ಮಾರ್ಚ್ 31ರಿಂದ ರಾಜ್ಯದಲ್ಲಿ ಎಸ್​​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಲಿದ್ದು, ಏಪ್ರಿಲ್ 15ರ ವರೆಗೆ ನಡೆಯಲಿದೆ. ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಉಚಿತವಾಗಿ ಸಂಚರಿಸಬಹುದು. ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಈ ಸೇವೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ನಿಗಮ ತಿಳಿಸಿದೆ. ಪರೀಕ್ಷಾ ಕೇಂದ್ರಗಳ ಬಳಿಯೇ ಬಸ್​ ನಿಲುಗಡೆ ನೀಡುವಂತೆ ಚಾಲಕರಿಗೆ ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!