ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಆಘಾತಕಾರಿ ಹಂತಕ್ಕೆ ದಾಪುಗಾಲು ಹಾಕುತ್ತಿರುವ ಕೋವಿಡ್‌ಗೆ ಕಡಿವಾಣ ಹಾಕಲು ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ಸಭೆಯಲ್ಲಿ ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಸಾರ್ವಜನಿಕ ಆರೋಗ್ಯ ಸಿದ್ದತೆ ಹಾಗೂ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ.
ದೇಶದಲ್ಲಿ ಒಂದೇ ದಿನ ೧,೧೩೪ ಕೋವಿಡ್ ಪ್ರಕರಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದೆ.