ಹೊಸದಿಗಂಥ ಡಿಜಿಟಲ್ ಡೆಸ್ಕ್:
ಯುಗಾದಿ ದಿನದಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಹುಸಿಯಾಗಿದ್ದು, ಮುಂದಿನ ಮೂರು ದಿನಗಳೊಳಗೆ ಪಟ್ಟಿ ಬಿಡುಗಡೆ ಮಾಡಲು ಪಕ್ಷ ನಿರ್ಧರಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಪ್ರಕ್ರಿಯೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಣಕ್ಕಿಳಿಯುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಮಾಡಲಾಗುವುದಿಲ್ಲ. ಮುಂದಿನ ಮೂರು ದಿನಗಳೊಳಗೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಯುಗಾದಿ ದಿನದಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕಳೆದ ಕೆಲ ದಿನಗಳ ಹಿಂದಷ್ಟೇ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದರು.