ಹೊಸದಿಗಂಥ ಡಿಜಿಟಲ್ ಡೆಸ್ಕ್:
ಭಾರತ ಆಯೋಜಿಸುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಅ.5ರಿಂದ ಪ್ರಾರಂಭವಾಗುವ ಸಾಧ್ಯತೆ ಬಹುತೇಕ ಖಚಿತವಾಗಿದೆ.
ಈ ಬಾರಿ ಪಂದ್ಯ ಭಾರತದಲ್ಲಿ ನಡೆಯಲಿದ್ದು ಅಂತಿಮ ಪಂದ್ಯವು ನ.19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೂಲಗಳ ಮಾಹಿತಿ ಪ್ರಕಾರ, ವಿಶ್ವಕಪ್‌ಗಾಗಿ ಬಿಸಿಸಿಐ ಒಟ್ಟು 12 ಸ್ಥಳಗಳನ್ನು ನಿರ್ಧರಿಸಿದೆ. ಅಹಮದಾಬಾದ್ ಹೊರತುಪಡಿಸಿ, ಇದು ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ, ಲಖನೌ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈಗಳಲ್ಲಿ ನಡೆಯಲಿದೆ. ಟೂರ್ನಿಯಲ್ಲಿ 10 ತಂಡಗಳು ಭಾಗವಹಿಸುತ್ತಿದ್ದು ಒಟ್ಟು 48 ಪಂದ್ಯಗಳು ನಡೆಯಲಿವೆ ಎನ್ನಲಾಗಿದೆ.