ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಶಾಸಕರ ಪರವಾಗಿ ಮಾತನಾಡಲು ಬಂದಿದ್ದ ಬಂದಿದ್ದ ಕಾರ್ಯಕರ್ತರೊಬ್ಬರ ಕೆನ್ನೆ ಕೆಂಪಾಗುವಂತೆ ಬಾರಿಸಿರುವ ಘಟನೆಯ ವಿಡಿಯೋ ವೈರಲ್ ಆಗಿದೆ. ಸಿದ್ದರಾಮಯ್ಯ ನಿವಾಸಕ್ಕೆ ಬಂದಿದ್ದ ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೈ ಮಾಡಿದ್ದಾರೆ.
ತಮ್ಮ ಕ್ಷೇತ್ರದ ಶಾಸಕ ರಾಮಪ್ಪನಿಗೆ ಹರಿಹರ ಕ್ಷೇತ್ರದ ಟಿಕೆಟ್ ನೀಡುವಂತೆ ಕಾರ್ಯಕರ್ತರು ಒತ್ತಾಯಿಸಿದರು. ಈ ವೇಳೆ ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟದಿಂದ ಕೋಪಗೊಂಡ ಸಿದ್ದರಾಮಯ್ಯ ಕಾರ್ಯಕರ್ತನಿಗೆ ಕೆನ್ನೆಗೆ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಸಿದ್ದರಾಮಯ್ಯರನ್ನು ಸುತ್ತುವರೆದು ಈ ಬಾರಿ ಟಿಕೆಟ್ ಬೇಕೇ ಬೇಕೆಂದು ಘೋಷಣೆ ಕೂಗಿದ್ದಾರೆ. ಈ ವೇಳೆ ತಾಳ್ಮೆ ಕಳೆದುಕೊಂಡ ಸಿದ್ದರಾಮಯ್ಯ ಕಾರ್ಯಕರ್ತನ ಕೆನ್ನೆಗೆ ಬಾರಿಸಿ ಮುಂದೆ ಸಾಗುತ್ತಿರುವ ವಿಡಿಯೋವನ್ನು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.
ಶಾದಿ ಭಾಗ್ಯದ ನಾಯಕ @siddaramaiah ಅವರಿಂದ ಕಪಾಳ ಮೋಕ್ಷ ಭಾಗ್ಯ! pic.twitter.com/BgCcpNdguD
— BJP Karnataka (@BJP4Karnataka) March 24, 2023