ರಾಜ್ಯದಲ್ಲಿ ಪ್ರತಿಷ್ಟಿತ ರಕ್ಷಾ ವಿಶ್ವ ವಿದ್ಯಾಲಯದ ಸ್ಥಾಪನೆ: ಅಮಿತ್ ಶಾ ಉಪಸ್ಥಿತಿಯಲ್ಲಿ ಒಡಂಬಡಿಕೆಗೆ ಸಹಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗ ನಗರದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯದ ಕರ್ನಾಟಕ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ಕರ್ನಾಟಕ ಸರಕಾರ ಹಾಗೂ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯ ಒಡಂಬಡಿಕೆ ಮಾಡಿಕೊಂಡಿವೆ.

ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ, ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಉಪಸ್ಥಿತಿಯಲ್ಲಿ, ವಿಶ್ವ ವಿದ್ಯಾಲಯದ ಉಪಕುಲಪತಿ ಬಿಮಲ್ ಎನ್ ಪಟೇಲ್ ಹಾಗೂ ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು.

ಈ ಮೂಲಕ ದಕ್ಷಿಣ ಭಾರತದಲ್ಲಿ, ರಕ್ಷಾ ವಿಶ್ವ ವಿದ್ಯಾಲಯದ ಅಧ್ಯಯನ ಕೇಂದ್ರ ಹೊಂದಿದ ಮೂರನೇ ರಾಜ್ಯ ಕರ್ನಾಟಕವಾಗಿದೆ.

ನಾಡಿನ ಯುವ ಜನತೆಗೆ ಭದ್ರತೆ ಹಾಗೂ ಪೊಲೀಸ್ ಸೇವೆಗಳ ಕ್ಷೇತ್ರದಲ್ಲಿ, ಅತ್ಯಾಧುನಿಕ ತರಭೇತಿ, ಶಿಕ್ಷಣ, ಸಂಶೋಧನೆ ಇತ್ಯಾದಿ ಚಟುವಟಿಕೆ ಹಮ್ಮಿಕೊಳ್ಳಲು ಹಾಗೂ ಈ ಕ್ಷೇತ್ರದಲ್ಲಿ ಅಗತ್ಯವಾಗಿ ಬೇಕಾಗಿದ್ದ ಮಾನವ ಸಂಪನ್ಮೂಲವನ್ನು ಸೃಜಿಸಲು ಈ ವಿಶ್ವವಿದ್ಯಾಲಯ ಮಹತ್ವದ ಕಾಣಿಕೆ ನೀಡಲಿದೆ ಎಂದು ಗೃಹ ಸಚಿವಆರಗ ಜ್ಞಾನೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ದಲ್ಲಿ ಸ್ಥಾಪಿತ ವಾಗಲಿರುವ ಪ್ರತಿಷ್ಠಿತ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯ ಎಂಟು ಎಕರೆ ಪ್ರದೇಶದಲ್ಲಿ ಪ್ರಸ್ತುತ, ಕೇಂದ್ರೀಯ ವಿದ್ಯಾಲಯ ದಲ್ಲಿರುವ ಸುಸಜ್ಜಿತ ಕಟ್ಟಡಗಳಲ್ಲಿ ರಕ್ಷಾ ವಿಶ್ವ ವಿದ್ಯಾಲಯದ ಪೀಠ ಕಾರ್ಯ ನಿರ್ವಹಿಸಲಿದ್ದು, ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ, ಕಾರ್ಯಾರಂಭ ಮಾಡಲಿದೆ, ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗದ ರಕ್ಷಾ ವಿಶ್ವ ವಿದ್ಯಾಲಯದ ಕೇದ್ರವು, ರಕ್ಷಣಾ ವಲಯಕ್ಕೆ ಸಂಬಂಧಿಸಿದಂತಹ ವಿವಿಧ ವಿಷಯಗಳ ಶಿಕ್ಷಣ ಪ್ರದಾನಕ್ಕೆ ಸಂಬಂಧಿಸಿದಂತೆ, ವಿಶ್ವ ಮಟ್ಟದ ಕೇಂದ್ರವಾಗಿ ಗುರುತಿಸಿಕೊಳ್ಳಲಿದೆ ಹಾಗೂ ಇಂತಹ ಕೇಂದ್ರವು, ರಾಜ್ಯದ, ಶಿವಮೊಗ್ಗ ಜಿಲ್ಲೆಗೆ ಮಂಜೂರಾತಿ ನೀಡಿದ ಕೇಂದ್ರ ಗೃಹ ಇಲಾಖೆ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!