ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೋಷಿ ಎಂದು ಸೂರತ್ ಕೋರ್ಟ್ ತೀರ್ಪು ನೀಡಿದ್ದ ಬೆನ್ನಲ್ಲೇ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ.
ಕಾಂಗ್ರೆಸ್ ಈ ಪ್ರಕರಣ ರಾಜಕೀಯ ಪ್ರೇರಿತ ಎಂದಿದೆ. ಅದಾನಿ ಪ್ರಕರಣ ಸೇರಿದಂತೆ ಬಿಜೆಪಿ ವಿರುದ್ಧ ಧ್ವನಿ ಎತ್ತಿದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದೆ.
ಇದೀಗ ರಾಹುಲ್ ಗಾಂಧಿ ಟ್ವೀಟ್ ಮೂಲಕ ತಮ್ಮ ನಡೆಯನ್ನು ಸಮರ್ಥಸಿಕೊಂಡಿದ್ದಾರೆ. ಭಾರತದ ಒಕ್ಕೊಲರ ಧ್ವನಿಗಾಗಿ ನನ್ನ ಹೋರಾಟ. ಈ ವಿಚಾರದಲ್ಲಿ ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಹೇಳಿದ್ದಾರೆ.
ಬಿಜೆಪಿ ಅದಾನಿ ಪ್ರಕರಣದ ದಿಕ್ಕು ತಪ್ಪಿಸಲು ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದೆ. ಬಿಜೆಪಿ ಈ ರೀತಿಯ ಷಡ್ಯಂತ್ರದಿಂದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ ಎಂದು ರಾಜ್ಯ ನಾಯಕರು ಸೇರಿದಂತೆ ದಿಲ್ಲಿ ನಾಯಕರು ಹೇಳಿಕೆ ನೀಡಿದ್ದಾರೆ.
ಇದೀಗ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.ಮೇ ಭಾರತ್ ಕಿ ಅವಾಜ್ ಕೆ ಲಿಯೋ ಲಡ್ ರಹಾ ಹೂಂ, ಮೇ ಹರ್ ಕೀಮತ್ ಚುಕಾನೆ ಕೋ ತಯಾರ್ ಹೂಂ( ನಾನು ಭಾರತದ ಧ್ವನಿಗಾಗಿ ಹೋರಾಡುತ್ತಿದ್ದೇನೆ. ಇದರ ನಡುವೆ ಯಾವುದೇ ತ್ಯಾಗಕ್ಕೂ ಸಿದ್ದ) ಎಂದು ಹಿಂದಿಯಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.