ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಸ್ ಡಿ.ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದಕೇಸ್ಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಿಕೊಂಡಿದ್ದು, ರೂಪಾಗೆ ಸಮನ್ಸ್ ಜಾರಿಗೊಳಿಸಿದೆ.
ಏ. 26ಕ್ಕೆ ಹಾಜರಾಗುವಂತೆ 8ನೇ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ರೋಹಿಣಿ ಸಿಂಧೂರಿ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದರು. ಇದು ಕರ್ನಾಟಕ ರಾಜಕೀಯದಲ್ಲಿಯೂ ಭಾರೀ ಕೋಲಾಹಲಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಡಿ. ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಪರಿಹಾರ ಕೋರಿ ಲೀಗಲ್ ನೋಟಿಸ್ ಜಾರಿ ಮಾಡಿದ್ದರು.