ಹೊಸದಿಗಂತ ಡಿಜಿಟಲ್ ಡೆಸ್ಕ್ :
ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹೈದರಾಬಾದ್ನ ಕುಶಾಯ್ಗುಡ ಪ್ರದೇಶದ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ.
ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಶನಿವಾರದಂದು ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಂದಿಗುಡ ಪ್ರದೇಶದಲ್ಲಿ ತಂದೆ, ತಾಯಿ ಮತ್ತು ಅವರ ಇಬ್ಬರು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ಮಕ್ಕಳು ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು (ಮಾನಸಿಕವಾಗಿ ಅಸ್ವಸ್ಥರಾಗಿದ್ದಾರೆ) ಆದರೂ ದಂಪತಿಯು ಮಕ್ಕಳನ್ನು ನೋಡಿಕೊಳ್ಳುತ್ತಿದ್ದರು. ಮಕ್ಕಳು ಚೇತರಿಕೆಯನ್ನು ಕಾಣದ ಹಿನ್ನೆಲೆಯಲ್ಲಿ ಪೋಷಕರು ಖಿನ್ನತೆಗೆ ಒಳಗಾಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೃತರನ್ನು ಸತೀಶ್, ವೇದಾ, ನಿಶಿಕೇತ್ ಮತ್ತು ನಿಹಾಲ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.