ಸಂಸದ ಸ್ಥಾನದಿಂದ ಅನರ್ಹಗೊಂಡ ಬೆನ್ನಲ್ಲೇ ರಾಹುಲ್ ಗಾಂಧಿ ಟ್ವಿಟ್ಟರ್ ಖಾತೆಯ ಬಯೋ ಬದಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಸಂಸದ ಸ್ಥಾನದಿಂದ ಅನರ್ಹಗೊಂಡ ಬೆನ್ನಲ್ಲೇ ರಾಹುಲ್ ಗಾಂಧಿಯವರ ಟ್ವಿಟ್ಟರ್ ಖಾತೆಯ ಬಯೋವನ್ನು ಬದಲಾಯಿಸಲಾಗಿದೆ. ಅವರ ಬಯೋದಲ್ಲಿ Dis’Qualified MP ಅಂದರೆ ಅನರ್ಹ ಸಂಸದ ಎಂದು ಬರೆದುಕೊಂಡಿದ್ದಾರೆ.

ಮೋದಿ ಉಪನಾಮದ ಕುರಿತು ಅವಹೇಳನಕಾರಿ ಹೇಳಿಕೆಯಿಂದಾಗಿ ಕ್ರಿಮಿನಲ್ ಮಾನನಷ್ಟ ಆರೋಪದ ಮೇಲೆ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ ಸಂದರ್ಭದಲ್ಲಿ ತಮ್ಮ ಬಯೋದಲ್ಲಿ, ರಾಹುಲ್ ತಮ್ಮನ್ನು ಅನರ್ಹ ಸಂಸದ ಎಂದು ಕರೆದುಕೊಂಡಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಇಂದು ಒಂದು ದಿನದ ‘ಸಂಕಲ್ಪ ಸತ್ಯಾಗ್ರಹ’ ಮಾಡುತ್ತಿದೆ. 2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರನ್ನು ಟೀಕಿಸುವ ಭರದಲ್ಲಿ ಮೋದಿ ಉಪನಾಮ ಹೊಂದಿದವರೆಲ್ಲಾ ಕಳ್ಳರು ಎಂಬರ್ಥದ ವಿವಾದಾತ್ಮಕ ಹೇಳಿಕೆಯನ್ನು ರಾಹುಲ್‌ ಗಾಂಧಿ ನೀಡಿದ್ದರು. ಈ ಹೇಳಿಕೆಯ ಆಧಾರದ ಮೇಲೆ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ನ್ಯಾಯಾಲಯವು ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!