ಹೊಸದಿಗಂತ ಡಿಜಿಟಲ್ ಡೆಸ್ಕ್ :
ಖಾಸಗಿ ಶಾಲೆಯಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾದ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದ ದಿ ಕ್ರೈಸ್ತ ಕಿಂಗ್ ಶಾಲೆಯಲ್ಲಿ ಘಟನೆ ನಡೆದಿದೆ. ಪರೀಕ್ಷೆ ಆರಂಭವಾದ ಸಂದರ್ಭದಲ್ಲಿ ಕಿಡಿಗೇಡಿಗಳು ಹೆಜ್ಜೇನು ಗೂಡಿಗೆ ಕಲ್ಲೆಸೆದ ಪರಿಣಾಮ ಈ ಅಚಾತುರ್ಯ ಸಂಭವಿಸಿದೆ ಎಂದು ಹೇಳಲಾಗಿದೆ.
ಹೆಜ್ಜೇನು ದಾಳಿಯಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಗಾಯವಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದ್ದು, ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಕ್ಕಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದ ಪಾಲಕರ ಮೇಲೂ ಜೇನುಹುಳಗಳ ದಾಳಿ ನಡೆದಿದ್ದು, ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ.