ಹೊಸದಿಗಂತ ವರದಿ ವಿಜಯಪುರ:
ದಾಖಲೆ ಇಲ್ಲದೆ ಸಾಗಿಸುತ್ತಿದ್ದ 90 ಕುಕ್ಕರ್‌ಗಳನ್ನ ಪೊಲೀಸರು ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ್ ಚೆಕ್ ಪೋಸ್ಟ್ ನಲ್ಲಿ ಭಾನುವಾರ ನಡೆದಿದೆ.
ವಾಹನದಲ್ಲಿ ಕುಕ್ಕರ್ ಗಳನ್ನು ಯಾವುದೇ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ಸಂದರ್ಭ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.