ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಕೊಚ್ಚಿ ಬಳಿ ಕೋಸ್ಟ್ಗಾರ್ಡ್ಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡಿದೆ.ALH ಧ್ರುವ ಹೆಲಿಕಾಪ್ಟರ್ ಪರೀಕ್ಷೆಯ ವೇಳೆ ಪತನಗೊಂಡಿದೆ.
ಪೈಲಟ್ ಸೇರಿದಂತೆ ವಿಮಾನದಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಉಳಿದವರು ಸುರಕ್ಷಿತವಾಗಿದ್ದು, ವಿಮಾನಕ್ಕೆ ಹಾನಿಯಾಗಿದೆ ಎಂದು ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಮಾಹಿತಿ ನೀಡಿದೆ.
ಮೂಲಗಳ ಪ್ರಕಾರ, ಹೆಲಿಕಾಪ್ಟರ್ನಲ್ಲಿ ಮೂವರು ಕೋಸ್ಟ್ ಗಾರ್ಡ್ ಸಿಬ್ಬಂದಿ ಇದ್ದರು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮಧ್ಯಾಹ್ನ 12.30ರ ಸುಮಾರಿಗೆ ತರಬೇತಿ ಹಾರಾಟದ ಸಮಯದಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆದ ಕೂಡಲೇ ಅಪಘಾತಕ್ಕೀಡಾಗಿದೆ.