ಹೊಸದಿಗಂತ ವರದಿ, ವಿಜಯಪುರ:
ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿರುವ ಘಟನೆ ವಿಜಯಪುರ ತಾಲೂಕಿನ ತಿಡಗುಂದಿ ಹತ್ತಿರದ ಸೊಲ್ಲಾಪುರ ಹೆದ್ದಾರಿ ಬಳಿ ಭಾನುವಾರ ನಡೆದಿದೆ.
ಈ ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಸಣ್ಣ, ಪುಟ್ಟ ಗಾಯವಾಗಿದ್ದು, ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಆದರೆ ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ.
ಚಡಚಣದಿಂದ ಇಳಕಲ್ ಗೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.