ಮಹಿಳಾ ಪ್ರಿಮಿಯರ್ ಲೀಗ್ ಫೈನಲ್: ಮುಂಬೈ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
 
ಮಹಿಳಾ ಪ್ರಿಮಿಯರ್ ಲೀಗ್ ಟೂರ್ನಿಗೆ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಪ್ರಶಸ್ತಿಗಾಗಿ ಹೋರಾಟ ಮಾಡುತ್ತಿದೆ. ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಮುಂಬೈನ ಬ್ರೇಬೋರ್ನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಯಾರು ಪ್ರಶಸ್ತಿಗೆ ಮುತ್ತಿಕ್ಕುತ್ತಾರೆ ಕುತೂಹಲ ಹೆಚ್ಚಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದು ನೇರವಾಗಿ ಫೈನಲ್ ಪ್ರವೇಶಿಸಿದೆ. ಇತ್ತ ಮುಂಬೈ ಇಂಡಿಯನ್ಸ್ ಲೀಗ್ ಹಂತದಲ್ಲಿ 2 ಸೋಲು ಅನುಭವಿಸಿ ನೆಟ್ ರನ್‌ರೇಟ್ ಕುಸಿತ ಕಂಡಿತ್ತು. ಹೀಗಾಗಿ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!